ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸುನಿಲ್ಗೌಡ ಬಿ.ಪಾಟೀಲ್ಗೆ ಜಯ
ವಿಜಯಪುರ, ಸೆ.11: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ನ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ಗೌಡ ಬಿ.ಪಾಟೀಲ್ ಜಯಗಳಿಸಿದ್ದಾರೆ.
ಬಸನಗೌಡ ಪಾಟೀಲ ಯತ್ನಾಳ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನವಾಣೆ ನಡೆದಿತ್ತು. ಇಂದು ಬೆಳಗ್ಗೆ ದರಬಾರ್ ಹೈಸ್ಕೂಲ್ನಲ್ಲಿ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ನ ಸುನಿಲ್ಗೌಡ ಬಿ.ಪಾಟೀಲ್ ಸುಮಾರು 1,975ಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಗೂಳಪ್ಪ ಶೆಟಗಾರಗೆ ಸೋಲಾಗಿದೆ.
ಮತ ಎಣಿಕೆ ಹಿನ್ನೆಲೆಯಲ್ಲಿ ದರಬಾರ್ ಹೈಸ್ಕೂಲ್ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಿಹಿಹಂಚಿ ಸಂಭ್ರಮಿಸಿದರು. ಈ ಚುನಾವಣೆಯಲ್ಲಿ ಶೇ.99.07ರಷ್ಟು ಮತದಾನ ದಾಖಲಾಗಿದ್ದು, ಗಮನಾರ್ಹವಾಗಿತ್ತು.
Next Story