ಶಿವಮೊಗ್ಗ: ಗುಂಡು ಹಾರಿಸಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಶಿವಮೊಗ್ಗ, ಸೆ.16: ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಬೆಳಂದೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಅದೇ ಗ್ರಾಮದ ನಿವಾಸಿ ವರ್ಗೀಸ್ (65) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಡೆತ್ನೋಟ್ ಬರೆದಿಟ್ಟು ಇವರು ಮನೆಯಿಂದ ಹೊರತೆರಳಿದ್ದರು. ಕುಟುಂಬದವರು ಶೋಧ ನಡೆಸಿದಾಗ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story