ಸೆ 22: ಮೈಸೂರಿನಲ್ಲಿ ಎಸ್ಸೆಸ್ಸೆಫ್ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ 'ಖಿಯಾದ- 2018'
ಮೈಸೂರು, ಸೆ.21:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಹಮ್ಮಿಕೊಂಡಿರುವ 'ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಖಿಯಾದ-2018' ಕಾರ್ಯಕ್ರಮವು ಸೆ.22ರಂದು ಅಪರಾಹ್ನ 3 ಗಂಟೆಗೆ ಇಲ್ಲಿನ ಗೌಸಿಯಾ ನಗರದಲ್ಲಿರುವ ಅಲ್-ನೂರ್ ಎಜ್ಯುಕೇಶನ್ ಸೆಂಟರ್ ನಲ್ಲಿ ನಡೆಯಲಿದೆ.
ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸುವರು. ಎಸ್ಸೆಸ್ಸೆಫ್ ಮೈಸೂರು ಜಿಲ್ಲಾಧ್ಯಕ್ಷ ಅಧ್ಯಕ್ಷತೆ ವಹಿಸುವರು. ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ತರಗತಿಯನ್ನು ನಡೆಸಲಿರುವರು.
ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಮುನೀರ್ ಮದನಿ ಮೈಸೂರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ನಾಯಕ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story