ಪೆಟ್ರೋಲ್, ಡಿಸೇಲ್ ಬೆಲೆ ಕಡಿತ ವಿಚಾರಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಅ. 4: ಪೆಟ್ರೋಲ್, ಡಿಸೇಲ್ ಮೇಲಿನ ಸೆಸ್ 2.50 ರೂ. ಕಡಿತಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಕೇಂದ್ರ ಸರಕಾರಕ್ಕೆ ಈಗಲಾದರೂ ಬುದ್ಧಿ ಬಂತಲ್ಲ ಎಂದು ಕುಟುಕಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರವು ಒಂದು ತಿಂಗಳ ಹಿಂದೆಯೆ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ನ್ನು ಕಡಿತ ಮಾಡಿದೆ. ಮತ್ತೆ ಸೆಸ್ ಕಡಿತ ಮಾಡುವ ಯಾವುದೇ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. ಕೇಂದ್ರ ಸರಕಾರ ಈಗಲಾದರೂ ಎಚ್ಚೆತ್ತುಕೊಂಡು ದರ ಇಳಿಕೆ ಮಾಡಲು ಮುಂದಾಗಿರುವುದು ಸ್ವಾಗತಾರ್ಹ ನಿರ್ಧಾರವಾಗಿದೆ ಎಂದು ಕುಮಾರಸ್ವಾಮಿ ಇದೇ ವೇಳೆ ಪ್ರತಿಕ್ರಿಯೆ ನೀಡಿದರು.
Next Story