ಲೋಕಸಭಾ ಉಪಚುನಾವಣೆ: ಶೀಘ್ರದಲ್ಲೆ ಅಭ್ಯರ್ಥಿ ಆಯ್ಕೆ; ಎಚ್.ಡಿ. ದೇವೇಗೌಡ
ಬೆಂಗಳೂರು, ಅ.7: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರೆಂದು ಇನ್ನೂ ನಿರ್ಧರಿಸಿಲ್ಲ. ಮುಂದಿನ ಎರಡು ದಿನಗಳಲ್ಲಿ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ರವಿವಾರ ನಗರದ ಎಚ್.ಎನ್.ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ನಾಡೋಜ ಪ್ರೊ. ಹಂಪ ನಾಗರಾಜಯ್ಯ-83 ಅಂತಾರಾಷ್ಟ್ರೀಯ ಶುಭಾಶಯ ಸಮಾರಂಭದ ಬಳಿಕ ಮಾತನಾಡಿದ ಅವರು, ನಿನ್ನೆಯಷ್ಟೇ ಉಪಚುನಾವಣೆ ಘೋಷಣೆಯಾಗಿದೆ. ಹೀಗಾಗಿ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಮುಂದೂಡುವಂತೆ ನಾನು ಸಲಹೆ ಮಾಡಿಲ್ಲ. ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ನಾನು ಭೇಟಿ ಮಾಡಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ರನ್ನು ಮಾತ್ರ ಭೇಟಿ ಮಾಡಿದ್ದೆ. ಆ ಸಂದರ್ಭದಲ್ಲಿ ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಹಾಗೂ ನಿಗಮ, ಮಂಡಳಿಗಳ ನೇಮಕಾತಿಯನ್ನೂ ಮಾಡಿ ಎಂದು ಸೂಚಿಸಿದ್ದೇನೆ ಎಂದು ಸ್ಪಷ್ಟಣೆ ನೀಡಿದರು.
Next Story