ಚನ್ನಗಿರಿ: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ; ಆರೋಪಿ ಚಿಕ್ಕಪ್ಪ ವಶಕ್ಕೆ
ಚನ್ನಗಿರಿ, ಅ.11: 3 ವರ್ಷದ ಮಗುವಿನ ಮೇಲೆ ತನ್ನ ಚಿಕ್ಕಪ್ಪನೇ ಅತ್ಯಾಚಾರ ನಡೆಸಿದ ಘಟನೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಮಗುವನ್ನು ನೋಡಿಕೊಳ್ಳುವಂತೆ ಹೇಳಿ ತಾಯಿ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಮಗುವಿನ ಚಿಕ್ಕಪ್ಪ 45 ವರ್ಷದ ಸೈಯದ್ ಜಾಫರ್ ಎಂಬಾತ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ತಾಯಿ ಕೆಲಸದಿಂದ ಮನೆಗೆ ಬಂದಾಗ ಮಗು ಅಳುತ್ತಿರುವುದನ್ನು ಗಮನಿಸಿ ಪರೀಕ್ಷಿಸಿದಾಗ ಅತ್ಯಾಚಾರ ನಡೆದಿರುವುದನ್ನು ಶಂಕಿಸಿದ್ದಾರೆ. ಕೂಡಲೇ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ವಿಚಾರಿಸಿದಾಗ ಆತ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story