ಕರ್ನಾಟಕ ರಾಜ್ಯ ಮುಕ್ತ ವಿವಿಯ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಅವಧಿ ವಿಸ್ತರಣೆ
ಬೆಂಗಳೂರು, ಅ. 14: ಕರ್ನಾಟಕ ರಾಜ್ಯ ಮುಕ್ತ ವಿವಿಯ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಅವಧಿ ವಿಸ್ತರಣೆ ಮಾಡಲಾಗಿದೆ.
ದಂಡ ಶುಲ್ಕವಿಲ್ಲದೆ ಪ್ರಥಮ ವರ್ಷದ ಎಂಎಸ್ಸಿ ಕೋರ್ಸ್ಗಳ ಪ್ರವೇಶಾತಿಗೆ ಹಾಗೂ 200ರೂ ದಂಡ ಶುಲ್ಕದೊಂದಿಗೆ ಪ್ರಥಮ ವರ್ಷದ ಬಿಎ, ಬಿಕಾಂ, ಬಿಎಲ್ಐಎಸ್ಸಿ, ಎಂಎ, ಎಂಕಾಂ, ಎಂಸಿಜಿ, ಎಂಎಲ್ಐಎಸ್ಸಿ ಪ್ರವೇಶಾತಿಗೆ ಅ.20ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ಸರಕಾರಿ ರಜೆ ದಿನಗಳಂದು ಮತ್ತು ರವಿವಾರದಂದು ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತದೆ.
ಎಸ್ಸಿ-ಎಸ್ಟಿ ವರ್ಗದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಪ್ರವೇಶಾತಿ ಶುಲ್ಕದಲ್ಲಿ ವಿನಾಯಿತಿ ಪಡೆಯ ಬಹುದಾಗಿರುತ್ತದೆ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ.25ರಷ್ಟು ವಿನಾಯಿತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು. ಮಹಿಳಾ ಪ್ರಾದೇಶಿಕ ಕೇಂದ್ರ, ಸರಕಾರಿ ಪದ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03. ದೂರವಾಣಿ ಸಂ.-080-2344 8811, ಮೊಬೈಲ್ ಸಂಖ್ಯೆ-98445 06629 ಅನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.