ಶಿವರಾಮೇಗೌಡ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ: ಸಾರಿಗೆ ಸಚಿವ ತಮ್ಮಣ್ಣ
ಮೈಸೂರು,ಅ.15: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎಲ್.ಆರ್.ಶಿವರಾಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.
ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋಮವಾರ ಮೈಸೂರಿಗೆ ಆಗಮಿಸಿದ ಅವರು, ಮಾಧ್ಯಮದವರೊಂದಿಗೆ ಮಾತನಾಡಿದರು.
ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎಲ್.ಆರ್.ಶಿವರಾಮೇಗೌಡ ಅವರನ್ನು ಒಮ್ಮತದಿಂದ ಆಯ್ಕೆಮಾಡಲಾಗಿದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು, ಈ ಉಪ ಚುನಾವಣೆಯಲ್ಲಿ ಗೆಲುವು ನಮ್ಮದೇ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
Next Story