ಶಿವಮೊಗ್ಗ: ಮೂಲಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು
ಶಿವಮೊಗ್ಗ, ನ. 3: ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಶಿವಮೊಗ್ಗದ ದೊಡ್ಡಮಟ್ಟಿ ಹಾಗೂ ಭದ್ರಾವತಿಯ ಹೊಳೆಬೆಳಗಲು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮತದಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ನಂತರ ಮತದಾನ ಕಾರ್ಯದಲ್ಲಿ ಗ್ರಾಮಸ್ಥರು ಭಾಗಿಯಾದರು.
ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಮತಗಟ್ಟೆ ಸಂಖ್ಯೆ 11 ದೊಡ್ಡಮಟ್ಟಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದಾರೆ. ಈ ಗ್ರಾಮದಲ್ಲಿ 400 ಕ್ಕೂ ಹೆಚ್ಚು ಮತದಾರರು ಇದ್ದಾರೆ. ಇನ್ನು ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹೊಳೆಬೆಳಗಲು ಮತಗಟ್ಟೆ 152ರಲ್ಲಿ ಮತದಾನ ಮಾಡದೆ, ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದಾರೆ. ಹೊಳೆಬೆಳಗಲು ಗ್ರಾಮದಲ್ಲಿ 500ಕ್ಕೂ ಹೆಚ್ಚು ಮತದಾರರು ಇದ್ದಾರೆ ಎಂದು ತಿಳಿದುಬಂದಿದೆ.
Next Story