ಮಂಡ್ಯ: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು
ಮಂಡ್ಯ, ನ.12: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಭೂತನಹೊಸೂರು ಬಳಿ ಸೋಮವಾರ ಸಂಜೆ ನಡೆದಿದೆ.
ತಾಲೂಕಿನ ಜಯಪುರ ಗ್ರಾಮದ ರಾಜಣ್ಣ(50) ಹಾಗೂ ಪಾಂಡವಪುರ ತಾಲೂಕಿನ ಬಲ್ಲೇನಹಳ್ಳಿಯ ಪುಟ್ಟು(24) ಮೃತಪಟ್ಟಿದ್ದು, ನಾಗಮ್ಮ ಎಂಬವರು ತೀವ್ರವಾಗಿ ಗಾಯಗೊಂಡಿದ್ದಾರೆ.
ನಾಗಮ್ಮ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Next Story