ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
ಮಂಡ್ಯ, ನ.12: ಅನುಮಾನಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಶ್ರೀರಂಗಪಟ್ಟಣದ ಮೈಸೂರು ಬೆಂಗಳೂರು ಹೆದ್ದಾರಿಯ ಪಶ್ವಿಮವಾಹಿನಿ ಬಳಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಮುಚ್ಚಿದ ಅಂಗಡಿ ಮುಂಭಾಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸುಮಾರು 30 ವರ್ಷ ವಯಸ್ಸಿನ ಅಪರಿಚಿತ ಯುವಕನ ಬಾಯಿಗೆ ಪ್ಲಾಸ್ಟರ್ ಅಂಟಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Next Story