ಕೇಂದ್ರ ಸರ್ಕಾರದಿಂದ 'ಸಿಬಿಐ' ದುರುಪಯೋಗ ಆಗುತ್ತಿದೆ: ಸಿದ್ದರಾಮಯ್ಯ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಮುಖ್ಯಮಂತ್ರಿ
ಹುಬ್ಬಳ್ಳಿ, ನ. 18: ಕೇಂದ್ರ ಸರ್ಕಾರದಿಂದ ಸಿಬಿಐ ದುರುಪಯೋಗ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಹೇಳಿಕೆ ನೀಡಿದರು.
ನಂತರ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ರಾಜ್ಯ ಸರ್ಕಾರದ ಅನುಮತಿ ತೆಗೆದುಕೊಂಡೇ ಸಿಬಿಐ ವಿಚಾರಣೆ ನಡೆಸಬೇಕು, ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತೆ. ಇಂದಿರಾ ಕ್ಯಾಂಟೀನ್ ನಿಂದ ಕಾಂಗ್ರೆಸ್ಗೆ ಒಳ್ಳೆಯ ಹೆಸರು ಪಡೆಯಲಿದೆ ಎಂದು ಬಿಜೆಪಿಯವರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಹೇಳಿದರು.
ಜಿ.ಪರಮೇಶ್ವರ್ ಸಿಎಂ ಆಗುವ ತಮ್ಮ ಆಸೆಯನ್ನ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ನಲ್ಲಿ ಸಿಎಂ ಅರ್ಹ ಆಕಾಂಕ್ಷಿಗಳು ಸಾಕಷ್ಟು ಜನ ಇದ್ದಾರೆ. ನೆಹರು ಅವರನ್ನ ಹಿಟ್ಲರ್ ಎಂದು ಕರೆಯುವ ಆರೆಸ್ಸೆಸ್ ಪ್ಯಾಸಿಸ್ಟ್ ಮನೋಭಾವನೆ ಉಳ್ಳವರು. ಬಿಜೆಪಿಯವರು ಹಿಟ್ಲರ್ ನಂತೆ ಆಡಳಿತ ನಡೆಸುತ್ತಿದ್ದಾರೆ. ಬಿಜೆಪಿಯವರು ಹಿಟ್ಲರ್ ವಂಶಸ್ಥರು ಎಂದು ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದರು.
Next Story