ಮಂಡ್ಯ: ಎಚ್1ಎನ್1 ಗೆ ವ್ಯಕ್ತಿ ಬಲಿ
ಮಂಡ್ಯ, ನ.21: ಎಚ್1ಎನ್1 ಜ್ವರದಿಂದ ಬಳಲುತ್ತಿದ್ದ ಪಾಂಡವಪುರ ಪಟ್ಟಣದ ಕೃಷ್ಣನಗರ ನಿವಾಸಿ ಅಂತೋಣಿ ಮಹಿಮದಾಸ್(59) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಅಂತೋಣಿ ಮಹಿಮದಾಸ್ ಅವರು ಜೆಎಸ್ಎಸ್ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ 5 ಗಂಟೆ ಸಮಯದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ಖಚಿತಪಡಿಸಿವೆ.
Next Story