ಕೆ.ಆರ್.ಪೇಟೆ: ಗ್ಯಾಸ್ ಸಿಲಿಂಡರ್ ಸ್ಫೋಟ; ಮಹಿಳೆ ಮೃತ್ಯು
ಕೆ.ಆರ್.ಪೇಟೆ, ನ.21: ಪಟ್ಟಣದ ಕ್ರಿಶ್ಚಿಯನ್ ಕಾಲನಿಯಲ್ಲಿ ಮಂಗಳವಾರ ರಾತ್ರಿ ಅಡುಗೆ ಮಾಡುವಾಗ ಅನಿಲ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.
ಆಂಥೋಣಿಯಮ್ಮ(45) ಘಟನೆಯಲ್ಲಿ ಸಾವನ್ನಪ್ಪಿದವರು. ಇವರು ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಸುಟ್ಟ ಗಾಯಗಳಿಂದ ಅಸ್ವಸ್ಥಗೊಂಡಿದ್ದರು.
ತಕ್ಷಣ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಧ್ಯಾಹ್ನ ಸಾವನ್ನಪ್ಪಿದ್ದಾರೆ.
ಆಕೆಯ ಪುತ್ರ ಫೀಟರ್ ನೀಡಿದ ದೂರಿನ ಮೇರೆಗೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎಚ್.ಎಸ್.ವೆಂಕಟೇಶ್ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story