---

ಎತ್ತಿನಹೊಳೆ ಯೋಜನೆ: ರೈತರಿಗೆ ಸೂಕ್ತ ಪರಿಹಾರ ನೀಡಲು ಸಚಿವ ಶ್ರೀನಿವಾಸ್ ಸೂಚನೆ

ತುಮಕೂರು,ಡಿ.01:ಎತ್ತಿನಹೊಳೆ ಯೋಜನೆಗೆ ಜಿಲ್ಲೆಯಲ್ಲಿ ಮನೆ, ಜಮೀನು ಕಳೆದುಕೊಳ್ಳುವ ರೈತರಿಗೆ ಉತ್ತಮ ಬೆಲೆಯನ್ನು ನೀಡಿ ಪುನರ್ವಸತಿ ಕಲ್ಪಿಸಬೇಕು ಎಂದು ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ, ಮೇಲ್ಗಾಲುವೆ ನಿರ್ಮಾಣದ ಭೂಸ್ವಾಧೀನಕ್ಕೆ ಸಂಬಂಧಿಸಿದ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಪ್ರಯೋಜನಗಳ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗಾಗಿ ರೈತರು ಜಮೀನು, ಮನೆ ಹಾಗೂ ಮರಗಳನ್ನು ಕಳೆದುಕೊಳ್ಳಲಿದ್ದಾರೆ. ಇಂತಹ ರೈತರು ಉತ್ತಮ ಬೆಲೆಯನ್ನು ನೀಡುವಂತೆ ನನಗೆ ಮನವಿ ಮಾಡುತ್ತಿದ್ದು, ರೈತರಿಗೆ ಅನುಕೂಲಕರವಾಗುವ ರೀತಿಯಲ್ಲಿ ಉತ್ತಮ ಬೆಲೆಯನ್ನು ನಿಗದಿಪಡಿಸಿ, ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಎತ್ತಿನ ಹೊಳೆ ಕುಡಿಯುವ ನೀರು ಯೋಜನೆಯ 10.47 ಕಿ.ಮೀ. ಉದ್ದದ ಮೇಲ್ಗಾಲುವೆ ಹಾಗೂ 0.542 ಕಿ.ಮೀ. ಉದ್ದದ ಮುಖ್ಯ ಕಾಲುವೆ ನಿರ್ಮಾಣಕ್ಕಾಗಿ ಭೂಸ್ವಾಧೀನದಿಂದ ಜೀವನೋಪಾಯ ಕಳೆದುಕೊಳ್ಳುವ ರೈತರಿಗಿರುವ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಪ್ರಯೋಜನೆಗಳ ಬಗ್ಗೆ ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ ಕೆ. ಅವರು ಸಭೆಗೆ ವಿವರಿಸಿದರು. 

ಯೋಜನೆಯಿಂದ ಸಂಪೂರ್ಣ ಮನೆ ಕಳೆದುಕೊಳ್ಳುವವರಿಗೆ 5ಲಕ್ಷ ರೂ.ಗಳನ್ನು ನೀಡಬಹುದಾಗಿದೆ. ಸ್ಥಳಾಂತರಿತ ಕುಟುಂಬದವರಿಗೆ ಸಾರಿಗೆ ವೆಚ್ಚಕ್ಕಾಗಿ 50ಸಾವಿರ ನೀಡಲಾಗುತ್ತಿದೆ. ಭೂಸ್ವಾಧೀನಕ್ಕಾಗಿ ರೈತರಿಗೆ ಜಮೀನು ದರದ ಜೊತೆಗೆ ಪುನರ್ವಸತಿ ಪ್ರಯೋಜನಗಳು ಹೆಚ್ಚುವರಿಯಾಗಿ ನೀಡಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. 

ಯೋಜನೆಗಾಗಿ ಮನೆ, ಮಠ, ಜಮೀನು ಕಳೆದುಕೊಳ್ಳುವ ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗುವ ರೀತಿಯಲ್ಲಿ ಇರಬಾರದು. ರೈತರಿಗೆ ತಾರತಮ್ಯವಾಗದ ರೀತಿಯಲ್ಲಿ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಸಚಿವರು, ಹೇಮಾವತಿ ನಾಲೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಇದಕ್ಕಾಗಿ ಅಗತ್ಯವಿರುವ ಹಣವನ್ನು ಸರ್ಕಾರದಿಂದ ಬೇಗ ಪಡೆದುಕೊಳ್ಳಿ ಎಂದು ಭೂಸ್ವಾಧೀನಾಧಿಕಾರಿಗೆ ನಿರ್ದೇಶನ ನೀಡಿದರು. 

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ತುಮಕೂರು ಗ್ರಾಮಾಂತರ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರು, ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಸಂಬಂಧಿಸಿದಂತೆ ರೈತರೊಂದಿಗೆ ಸಭೆ ನಡೆಸದೆಯೇ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮೊದಲು ರೈತರೊಂದಿಗೆ ಸಭೆ ನಡೆಸಿ, ಅವರ ಅಭಿಪ್ರಾಯವನ್ನು ಪಡೆಯಿರಿ. ಅಲ್ಲಿಯವರೆಗೂ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ರೈತರೊಂದಿಗೆ ಸಭೆ ನಡೆಸಿ ಯೋಜನೆಯ ಕುರಿತಂತೆ ಚರ್ಚಿಸಿ ಅವರಿಂದ ಅಭಿಪ್ರಾಯ, ಒಪ್ಪಿಗೆ ಪಡೆಯಿರಿ ಎಂದು ಎತ್ತಿನ ಹೊಳೆ ಯೋಜನೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಗುಬ್ಬಿ ಹಾಗೂ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆಗಳಲ್ಲಿ ನೀರು ಇರುವುದಿಲ್ಲ. ಹೇಮಾವತಿ ನಾಲೆಯಿಂದ ನೀರು ಹರಿಸಿರಿ ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಹಾಗೂ ಶಾಸಕರು ಹೇಳಿದರು. 

ಸಭೆಯಲ್ಲಿ ತುಮಕೂರು ಉಪವಿಭಾಗಾಧಿಕಾರಿ ಶಿವಕುಮಾರ್ ಸೇರಿದಂತೆ ಎತ್ತಿನ ಹೊಳೆ ಯೋಜನೆಯ ಅಧಿಕಾರಿಗಳು ಹಾಜರಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top