ಶ್ರೀಗಳ ಆರೋಗ್ಯ ಸ್ಥಿರವಾಗಿದೆ : ಸಿಎಂ ಕುಮಾರಸ್ವಾಮಿ
ಬೆಂಗಳೂರು, ಡಿ.7: ಡಾ.ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ತಿಳಿಸಿದರು.
ಶ್ರೀಗಳ ಆರೋಗ್ಯದ ಕ್ಷಣಕ್ಷಣದ ಮಾಹಿತಿಯನ್ನು ಸರಕಾರ ಪಡೆಯುತ್ತಿದೆ ಎಂದರು.
Next Story