ಮಂಡ್ಯ: ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಪರಿಹಾರ ವಿತರಣೆ
ಮಂಡ್ಯ, ಡಿ.7: ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ಖಾಸಗಿ ಬಸ್ ನಾಲೆಗೆ ಉರಳಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ವದೆಸಮುದ್ರ ಗ್ರಾಮದಲ್ಲಿ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಣೆ ಮಾಡಿದರು.
ಅಪಘಾತದಲ್ಲಿ ಸಾವಿಗೀಡಾದ ಪ್ರತಿ ಮೃತರ ಕುಟುಂಬದ ಸದಸ್ಯರಿಗೆ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು. ನವೆಂಬರ್ 24 ರಂದು ನಡೆದ ಬಸ್ ದುರಂತದಲ್ಲಿ 30 ಮಂದಿ ಮೃತ ಪಟ್ಟಿದ್ದು, ಹೆಚ್ಚಿನ ಜನರು ವದೇಸಮುದ್ರ ಗ್ರಾಮದ ನಿವಾಸಿಗಳಾಗಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಸಂಸದ ಎಲ್.ಆರ್.ಶಿವರಾಮೇಗೌಡ, ವಿಧಾನಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಎನ್.ಅಪ್ಪಾಜಿಗೌಡ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.
Next Story