ಮೈಸೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ
ಮೈಸೂರು,ಡಿ.7: ಕ್ಷುಲ್ಲುಕ ವಿಚಾರಕ್ಕೆ ವ್ಯಕ್ತಿಯೋರ್ವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮೈಸೂರು ಜಿಲ್ಲೆ ಹೆಚ್ .ಡಿ. ಕೋಟೆಯಲ್ಲಿ ನಡೆದಿದೆ.
ತಾಲೂಕಿನ ಆಲನಹಳ್ಳಿಯ ಜವರ ನಾಯಕ ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಗಂಭೀರ ಗಾಯಗಳಾಗಿವೆ. ಗಾಯಗೊಂಡ ಜವರ ನಾಯಕ ಅವರನ್ನು ಕೆ.ಆರ್.ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ನಾಯಕರ ಸಂಘದ ಅಧ್ಯಕ್ಷ ಪಡುವಾರಹಳ್ಳಿ ರಾಮಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ವ್ಯಕ್ತಿಗೆ ಸಾಂತ್ವನ ಹೇಳಿದರು.
Next Story