ಹನೂರು: ದೇವಸ್ಥಾನದ ಪ್ರಸಾದ ಸೇವಿಸಿ ಏಳು ಸಾವು; 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಹನೂರು,ಡಿ.14: ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಏಳು ಮಂದಿ ಮೃತಪಟ್ಟಿದ್ದು, 80 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ರಾಮಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ಬಿದ್ದರಹಳ್ಳಿ ನಿವಾಸಿಗಳಾದ ಗೋಪಿಯಮ್ಮ(35), ಶಾಂತರಾಜು (20) ಒಡರದೊಡ್ಡಿ ನಿವಾಸಿ ಅನಿತಾ, ದೊಡ್ಡಾಣೆ ನಿವಾಸಿ ಅಣ್ಣಯಪ್ಪ ಹಾಗೂ ಎಂ.ಜಿ ದೊಡ್ಡಿ ನಿವಾಸಿ ಪಾಪಣ್ಣ(35) ಎಂದು ಗುರುತಿಸಲಾಗಿದ್ದು, ಅಸ್ವಸ್ಥಗೊಂಡವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸುಲ್ವಾಡಿಯ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಸಮಾರಂಭದಲ್ಲಿ ಈ ಅವಘಡ ಸಂಭವಿಸಿದೆ. ಕಾರ್ಯಕ್ರಮದಲ್ಲಿ ಭಕ್ತರಿಗೆ ಹಂಚಿದ ಪ್ರಸಾದ ತಿಂದ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.
ಪ್ರಸಾದವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿದ್ದಾರೆ.
Next Story