ತುಮಕೂರು: ಹಾಸ್ಟೆಲ್ನಲ್ಲಿ ಉಪಹಾರ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ತುಮಕೂರು,ಡಿ.16: ವಿದ್ಯಾರ್ಥಿ ನಿಲಯದಲ್ಲಿ ಉಪಹಾರ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೊನೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಕೊನೆಹಳ್ಳಿ ಗ್ರಾಮದಲ್ಲಿರುವ ಪಶುಸಂಗೋಪನಾ ವಿದ್ಯಾರ್ಥಿ ನಿಲಯದಲ್ಲಿ ಬೆಳಗ್ಗಿನ ಉಪಹಾರ ಸೇವಿಸಿದ ಬಳಿಕ ಸುಮಾರು 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದ್ದು, ಅವರನ್ನು ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story