ಗ್ರಾಹಕರ ಗಮನಕ್ಕೆ...ಡಿ.21 ರಿಂದ ಬ್ಯಾಂಕುಗಳಿಗೆ ಸಾಲು ರಜೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಡಿ.16: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ ವತಿಯಿಂದ ಡಿ.21 ರಂದು ಮುಷ್ಕರಕ್ಕೆ ಕರೆ ನೀಡಿದ್ದು, ಬ್ಯಾಂಕ್ ವಹಿವಾಟಿನಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಅಲ್ಲದೆ, ಡಿ.22 ರಂದು ನಾಲ್ಕನೇ ಶನಿವಾರ, ಡಿ.23 ರವಿವಾರವಿದ್ದು, ಡಿ.25 ರಂದು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಾರ್ವಜನಿಕ ರಜೆ ಹಾಗೂ ಡಿ.26 ರಂದು ದೇನಾ, ವಿಜಯ ಮತ್ತು ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ಗಳ ವಿಲೀನ ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿ ಒಕ್ಕೂಟ(ಎಐಬಿಇಒ) ಮುಷ್ಕರ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಡಿ.21 ರಿಂದ ಐದು ದಿನಗಳ ಕಾಲ ಸಾಲು ರಜೆಗಳಿದ್ದು, ಬ್ಯಾಂಕ್ಗಳು ಕಾರ್ಯನಿರ್ವಹಿಸುವುದಿಲ್ಲ.
Next Story