ಹನೂರು ವಿಷ ಪ್ರಸಾದ ಪ್ರಕರಣ: ಸಾಲೂರು ಮಠದ ಶ್ರೀಗಳ ವಿಚಾರಣೆ
ಚಾಮರಾಜನಗರ,ಡಿ.16: ಕಿಚ್ಚುಗತ್ತಿ ಮಾರಮ್ಮನ ದೇಗುಲದ ಪ್ರಸಾದ ಸೇವಿಸಿ 13 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲೂರು ಮಠದ ಕಿರಿಯಶ್ರೀ ಇಮ್ಮಡಿ ಮಹಾದೇವ ಸ್ವಾಮಿ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಅವರ ನೇತೃತ್ವದ ತಂಡ ಶ್ರೀಗಳನ್ನು ವಿಚಾರಣೆಗೆ ಒಳಪಡಿಸಿದೆ. ದೇಗುಲದ ಟ್ರಸ್ಟ್ನ ಅಧ್ಯಕ್ಷರೂ ಆಗಿರುವ ಶ್ರೀಗಳು ದುರಂತ ನಡೆದ ದಿನದಂದು ಕಾರ್ಯಕ್ರಮದಲ್ಲಿ ಗೈರು ಹಾಜರಾಗಿದ್ದುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಇವರ ಮೇಲೆ ವಿಷ ಬೆರೆಸಿರುವ ಆರೋಪ ಕೇಳಿ ಬಂದಿದ್ದರಿಂದ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಈಗಾಗಲೇ ಘಟನೆ ಸಂಬಂಧ 7 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶ್ರೀಗಳೂ ಸೇರಿ ಒಟ್ಟು 8 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರತ್ಯಕ್ಷದರ್ಶಿ ರಾಜಮ್ಮ ಎಂಬವರ ಹೇಳಿಕೆಯನ್ನು ಆಧರಿಸಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
Next Story