ಶಾಲಾ ಶೌಚಾಲಯದ ಕಟ್ಟಡ ಕುಸಿದು ವಿದ್ಯಾರ್ಥಿನಿ ಮೃತ್ಯು
ಕೋಲಾರ,ಡಿ.19: ಶಾಲಾ ಶೌಚಾಲಯದ ಕಟ್ಟಡ ಕುಸಿದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮುಳಬಾಗಿಲು ಪಟ್ಟಣದ ಗುಣಿಗುಂಟೆ ಪಾಳ್ಯದಲ್ಲಿ ನಡೆದಿದೆ.
ಮೊರಾರ್ಜಿ ದೇಸಾಯಿ ಶಾಲೆಯ ಶೌಚಾಲಯದ ಕಟ್ಟಡ ಕುಸಿದು ದುರ್ಘಟನೆ ಸಂಭವಿಸಿದ್ದು, ಪರಿಣಾಮ 6ನೇ ತರಗತಿ ವಿದ್ಯಾರ್ಥಿನಿ ಜೋಸ್ನಾ ಮೃತಪಟ್ಟಿದ್ದಾಳೆ.
ಖಾಸಗಿ ಕಟ್ಟಡದಲ್ಲಿದ್ದ ಈ ಶಾಲೆಯು ರಾಜಕಾಲುವೆ ಪಕ್ಕದಲ್ಲಿ ಇದ್ದುದರಿಂದ ತೇವಾಂಶ ಹೆಚ್ಚಾಗಿ ಕುಸಿದಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಜೆ.ಮಂಜುನಾಥ್, ತಹಶೀಲ್ದಾರ್ ಪ್ರವೀಣ್ ಹಾಗೂ ಮುಳಬಾಗಿಲು ನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
Next Story