ಬಾಲಕಿಯ ಅತ್ಯಾಚಾರ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮೈಸೂರು,ಡಿ.24: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎಚ್.ಡಿ.ಕೋಟೆ ಮತ್ತು ಸರಗೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಹುಣಸೂರು ತಾಲೂಕಿನ ಹನಗೋಡು ಸಮೀಪದ ಕೊಳವಿಗೆ ಗ್ರಾಮದ ದಿನೇಶ (27) ಬಂಧಿತ ಆರೋಪಿ. ಬಂಧಿತ ದಿನೇಶ್ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕಳೆದ ನಾಲ್ಕು ದಿನಗಳಿಂದ ತಲೆ ಮರೆಸಿಕೊಂಡಿದ್ದ ಎನ್ನಲಾಗಿದ್ದು. ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಆರೋಪಿ ದಿನೇಶ್ ಗಾಗಿ ಬಲೆ ಬೀಸಿದ್ದ ಎಚ್.ಡಿ ಕೋಟೆ ಠಾಣಾ ಪೊಲೀಸರು ಇದೀಗ ಹೆಡೆಮುರಿಕಟ್ಟಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Next Story