ಸಿಂಧಗಿ: ಟ್ರಾಕ್ಟರ್ಗೆ ಟ್ಯಾಂಕರ್ ಢಿಕ್ಕಿ; ಓರ್ವ ಮೃತ್ಯು
ವಿಜಯಪುರ, ಡಿ.28: ಇಂಧನ ತೈಲ ಸಾಗಾಟದ ಟ್ಯಾಂಕರ್ ಮತ್ತು ಕಬ್ಬು ತುಂಬಿದ ಟ್ರಾಕ್ಟರ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಟ್ಯಾಂಕರ್ ಚಾಲಕ ಸ್ಥಳದಲ್ಲಿ ಮೃತಪಟ್ಟ ಘಟನೆ ಸಿಂದಗಿ ತಾಲೂಕಿನ ಯರಗಲ್ಲ ಗ್ರಾಮದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಆದರೆ ಅವರು ಬೆಳಗಾವಿ ಮೂಲದವರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಟ್ರಾಕ್ಟರ್ ಚಾಲಕನಿಗೆ ಗಾಯಗಳಾಗಿವೆ. ಆತನನ್ನು ಸಿಂಧಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಸಿಂಧಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story