ಮಂಡ್ಯ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ
ಮಂಡ್ಯ, ಡಿ.30: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ ಆಗಿರುವ ಘಟನೆ ತಾಲೂಕಿನ ಸಾತನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶ್ರೀನಿವಾಸ್ ಎಂಬವರ ಪತ್ನಿ ಕೋಮಲಾ(30) ಹಾಗೂ ಮಕ್ಕಳಾದ ಹರಿಣಿ(6) ಹಾಗೂ ಜೀವಿತಾ(3) ನಾಪತ್ತೆಯಾಗಿದ್ದಾರೆ.
ಶನಿವಾರ ಮಕ್ಕಳೊಂದಿಗೆ ಹೋದ ತಾಯಿ ಇನ್ನೂ ಮನೆಗೆ ವಾಪಸ್ ಬಂದಿಲ್ಲ. ಪತ್ನಿ ಮಕ್ಕಳನ್ನು ಹುಡುಕಿಕೊಡಿ ಎಂದು ಶ್ರೀನಿವಾಸ್ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Next Story