ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕೆ: ಸಚಿವ ಜಿ.ಟಿ.ದೇವೇಗೌಡ
ಮೈಸೂರು,ಜ.12: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆ ಮಾಡುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಉನ್ನತ ಶಿಕ್ಷಣ ಮತ್ತು ಮೈಸೂರು ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಈ ಸಂಬಂಧ ರವಿವಾರ ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನ ಮಾಡುವುದಾಗಿ ಹೇಳಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಹಲವು ಕ್ಷೇತ್ರಗಳಲ್ಲಿ ಹೊಂದಾಣಿಕೆ ಮಾತುಕತೆ ನಡೆದಿದೆ. ಆದರೆ ಮೈಸೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂಬ ಮಾತುಕತೆಗಳು ನಡೆದಿದೆ. ಹಾಗಾಗಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದರು.
Next Story