ಹನೂರು: ಅಕ್ರಮ ಮದ್ಯ ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನ
ಹನೂರು,ಜ.15: ಹನೂರು ಕ್ಷೇತ್ರ ವ್ಯಾಪ್ತಿಯ ಬಾಣೂರು ಗ್ರಾಮದಲ್ಲಿ ಅಕ್ರಮ ಮದ್ಯ ಸಂಗ್ರಹಿಸಿದ್ದ ಆರೋಪಿಯನ್ನು ಹನೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಾಣೂರು ಗ್ರಾಮದ ನಾಗರಾಜು ಆಲಿಯಾಸ್ ಪಿಯ್ಯ (45) ಬಂಧಿತ ಆರೋಪಿ. ಈತ ಜ.21ರಿಂದ ಚಿಕ್ಕಲ್ಲೂರು ಜಾತ್ರೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಮದ್ಯವನ್ನು ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹನೂರು ಪೋಲಿಸರು ಮನೆಯ ಮೇಲೆ ದಾಳಿ ನಡೆಸಿ 90ಎಂಎಲ್ನ 90 ಮದ್ಯದ ಪೌಚ್ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಯಿತು.
ಈ ಸಂಬಂಧ ಹನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story