ನಿವೃತ್ತ ಸೈನಿಕನ ಮೇಲೆ ಹಲ್ಲೆ: ಆರೋಪ
ಬೆಂಗಳೂರು, ಜ.20: ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಅಪಾರ್ಟ್ಮೆಂಟ್ಗೆ ನುಗ್ಗಿ ನಿವೃತ್ತ ಸೈನಿಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಗರದ ವಾರಿಯರ್ಸ್ ಅಪಾರ್ಟ್ಮೆಂಟ್ ನಲ್ಲಿರುವ ಮಾಜಿ ಸೈನಿಕ ಶಿಂಧೆ ಎನ್ನುವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಶನಿವಾರ ಶಿಂಧೆ ಅವರು ಯಲಹಂಕದ ಬಳಿಯ ರಸ್ತೆಯಲ್ಲಿ ಬರುತ್ತಿದ್ದಾಗ, ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ಹಲ್ಲೆ ಗೊಳಗಾಗಿರುವ ಶಿಂಧೆ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ ಎಂದು ಹೇಳಲಾಗುತ್ತಿದೆ.
ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಯಲಹಂಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Next Story