ಕೊಡಗು: ನೂತನ ಜಿಲ್ಲಾಧಿಕಾರಿಯಾಗಿ ಅನ್ನೀಸ್ ಕೆ.ಜಾಯ್ ನೇಮಕ
ಮಡಿಕೇರಿ ಜ.30: ತುಮಕೂರು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಅನ್ನೀಸ್ ಕೆ.ಜಾಯ್ ಅವರನ್ನು ಕೊಡಗಿನ ನೂತನ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಕ ಮಾಡಿದೆ.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಪಿ.ಐ.ಶ್ರೀವಿದ್ಯಾ ಅವರು ಎರಡು ತಿಂಗಳ ರಜೆಯಲ್ಲಿ ತೆರಳಿದ್ದಾರೆ ಎಂದು ಹೇಳಲಾಗುತ್ತಿತ್ತಾದರೂ ಅವರನ್ನು ವರ್ಗಾವಣೆ ಮಾಡಿರುವ ವಿಚಾರ ಇದೀಗ ಖಾತ್ರಿಯಾಗಿದೆ.
Next Story