ಲಾರಿ-ಬೈಕ್ ಮುಖಾಮುಖಿ ಢಿಕ್ಕಿ: ಸವಾರರಿಬ್ಬರಿಗೆ ಗಂಭೀರ ಗಾಯ
ಮೈಸೂರು, ಫೆ.10: ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ರವಿವಾರ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಚಾಮರಾಜನಗರ ಕಡೆಯಿಂದ ಬರುತ್ತಿದ್ದ ಹೋಂಡಾ ಬೈಕ್ ಮತ್ತು ಮೈಸೂರು ಕಡೆಯಿಂದ ಟಿವಿಎಸ್ ಕಂಪನಿಯ ದ್ವಿಚಕ್ರ ವಾಹನ ಹೊತ್ತೊಯ್ಯುತ್ತಿದ್ದ ಲಾರಿ ನಂಜನಗೂಡು ತಾಲೂಕು ಕೌಲಂದೆ ಗ್ರಾಮದ ಬಳಿ ಮುಖಾಮುಖಿ ಢಿಕ್ಕಿಯಾಗಿದೆ.
ಬೈಕ್ ಸವಾರರಿಬ್ಬರಿಗೂ ತೀವ್ರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಗಾಯಾಳುಗಳಿಬ್ಬರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೌಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story