ಲಾರಿ-ಕ್ಯಾಂಟರ್ ಮುಖಾಮುಖಿ ಢಿಕ್ಕಿ: ಓರ್ವ ಮೃತ್ಯು, ಇಬ್ಬರು ಗಂಭೀರ
ವಿಜಯಪುರ, ಫೆ.20: ಲ್ಯಾರಿ ಮತ್ತು ಕ್ಯಾಂಟರ್ ವಾಹನ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂಡಿ ತಾಲೂಕಿನ ದೆಗಿನಾಳ ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಮಧ್ಯೆ ಅಪಘಾತದ ತೀವ್ರತೆಗೆ ಕ್ಯಾಂಟರ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಕ್ಯಾಂಟರ್ ಅನ್ನು ಆವರಿಸುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು.
ಈ ಬಗ್ಗೆ ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story