ಭೀಮಾ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ವಿಜಯಪುರ, ಫೆ.21: ಚಡಚಣ ತಾಲೂಕಿನ ಉಮರಜ ಗ್ರಾಮದ ಭೀಮಾ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹವೊಂದು ಪತ್ತೆಯಾಗಿದೆ.
ಇಲ್ಲಿನ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಹತ್ತಿರ ಭೀಮಾ ನದಿಯಲ್ಲಿ ಸುಮಾರು 35ರಿಂದ 40 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ಒಂದು ವಾರದ ಹಿಂದೆ ನದಿಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಚಡಚಣ ಪೊಲೀಸರು ಮೃತದೇಹವನ್ನು ನದಿಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆ ಮಾಡಿಸಿದರು. ಈ ಬಗ್ಗೆ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story