ದ್ವಿತೀಯ ಪಿಯು ಪರೀಕ್ಷೆ : ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ
ಬೆಂಗಳೂರು, ಫೆ. 21: ದ್ವಿತೀಯ ಪಿಯುಸಿ ಪರೀಕ್ಷೆ ಮಾ.1ರಿಂದ ಪ್ರಾರಂಭವಾಗುತ್ತಿದ್ದು, ಎಲ್ಲ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದ ವರೆಗೆ ಪರೀಕ್ಷಾ ಪ್ರವೇಶಪತ್ರ ತೋರಿಸಿ ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಲಿಸಲಾಗಿದೆ.
ಮಾ.1ರಿಂದ ಮಾ.18ರ ವರೆಗೆ ಪರೀಕ್ಷೆ ನಡೆಯಲಿದ್ದು, ಈ ವೇಳೆ ಕೆಎಸ್ಸಾರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.
Next Story