ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ನಿಷೇಧಾಜ್ಞೆ: ದಾವಣಗೆರೆ ಜಿಲ್ಲಾಧಿಕಾರಿ
ದಾವಣಗೆರೆ,ಫೆ.28: ಮಾ.1 ರಿಂದ 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಜಿಲ್ಲೆಯ ವಿವಿಧ 36 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲಾ ವ್ಯಾಪ್ತಿಯ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ಪರೀಕ್ಷಾ ಅವಧಿಯಲ್ಲಿ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story