ಗಲಾಟೆಯಿಂದ ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ
ಮಂಡ್ಯ,ಮಾ.9: ಕ್ಷುಲ್ಲಕ ಕಾರಣಕ್ಕೆ ನೇಣು ಬಿಗಿದುಕೊಂಡು ಯುವಕನೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಹುಲಿಕೆರೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ದೀಪಕ್ (22)ಮೃತ ಯುವಕ. ಶುಕ್ರವಾರ ಯುವಕರ ಗುಂಪಿನ ನಡುವೆ ನಡೆದ ಗಲಾಟೆಯಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story