ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಶಾಮನೂರು ಶಿವಶಂಕರಪ್ಪ ಪುನರಾಯ್ಕೆ
ದಾವಣಗೆರೆ,ಮಾ.14: ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ಹೊರತುಪಡಿಸಿ ಯಾರು ಕೂಡ ನಾಮಪತ್ರ ಸಲ್ಲಿಸದ ಕಾರಣ ಶಿವಶಂಕರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಉಮೇಶ್ ಘೋಷಿಸಿದರು.
ಗುರುವಾರ ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಿವಶಂಕರಪ್ಪ ಅವರಿಗೆ ಚುನಾವಣಾಧಿಕಾರಿಗಳು ಪ್ರಮಾಣಪತ್ರವನ್ನು ವಿತರಿಸಿದರು. ಇದೇ ವೇಳೆ ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಎನ್.ತಿಪ್ಪಣ್ಣನವರಿಗೂ ಪ್ರಮಾಣಪತ್ರ ನೀಡಲಾಯಿತು.
Next Story