ವಿದ್ಯುತ್ ಸ್ಪರ್ಶಿಸಿ ಮಹಿಳೆ ಮೃತ್ಯು: ಇಬ್ಬರಿಗೆ ಗಂಭೀರ ಗಾಯ
ವಿಜಯಪುರ,ಮಾ.15: ವಿದ್ಯುತ್ ತಂತಿ ತುಳಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೋರಗಿ ಗ್ರಾಮದಲ್ಲಿ ನಡೆದಿದೆ.
ಜಯಶ್ರಿ ಹಿಪ್ಪರಗಿ ಮೃತ ಮಹಿಳೆ. ಮಲ್ಲಪ್ಪ ಹಿಪ್ಪರಗಿ (30) ಮಲ್ಲಣ್ಣ ಹಿಪ್ಪರಗಿ (45) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮೂವರು ಒಂದೇ ಕುಟುಂಬದ ಸದಸ್ಯರಾಗಿದ್ದಾರೆ.
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎನ್ನಲಾಗದ್ದು, ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story