ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಸೇರಿ ಐವರಿಗೆ ಗಂಭೀರ ಗಾಯ
ಮಂಡ್ಯ, ಮಾ.15: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಬೈಕ್ಗೆ ಢಿಕ್ಕಿ ಹೊಡೆದು ನಂತರ ರಸ್ತೆಬದಿ ನಿಂತಿದ್ದ ವಿದ್ಯಾರ್ಥಿನಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿ ವಿದ್ಯಾರ್ಥಿನಿಯ ಕಾಲು ತುಂಡಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೋಡಿಶೆಟ್ಟಿಪುರದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಈ ಅವಘಡದಲ್ಲಿ ಗದಗ ಮೂಲದ ಬೈಕ್ ಸವಾರ ಸಂತೋಷ್(22) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವಿದ್ಯಾರ್ಥಿನಿ ಮೌನಶ್ರಿ(20) ಎಂಬವರ ಕಾಲು ತುಂಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story