ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ
ಕಲಬುರಗಿ, ಮಾ.17: ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪಿಗಳಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕಾಳಗಿ ಗ್ರಾಮದ ನಿವಾಸಿ ಸುನಿಲಕುಮಾರ್ ಎಂಬಾತ ಯುವತಿಯು ಮನೆಯಲ್ಲಿ ಒಬ್ಬಳೆ ಇರುವಾಗ ಮನೆಗೆ ಬಂದು ಅತ್ಯಾಚಾರವೆಸಗಿದ್ದ. ಅಲ್ಲದೆ ಆಕೆಯನ್ನು ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿಯೂ ಕೂಡ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆಂದು ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೊಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಇನ್ನು ವಾದ, ಪ್ರತಿವಾದ ಆಲಿಸಿದ 2ನೆ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ಸುನಿಲ್ಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಇನ್ನು ಪ್ರಕರಣದಲ್ಲಿ ನೊಂದ ಬಾಲಕಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
Next Story