ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಾಳೆಯಿಂದ ಆರಂಭ: ಅಭ್ಯರ್ಥಿಗಳ ಆಯ್ಕೆಗೆ ರಾಜಕೀಯ ಪಕ್ಷಗಳ ಕಸರತ್ತು | Vartha Bharati- ವಾರ್ತಾ ಭಾರತಿ

---

ಲೋಕಸಭೆ ಚುನಾವಣೆ

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಾಳೆಯಿಂದ ಆರಂಭ: ಅಭ್ಯರ್ಥಿಗಳ ಆಯ್ಕೆಗೆ ರಾಜಕೀಯ ಪಕ್ಷಗಳ ಕಸರತ್ತು

ಬೆಂಗಳೂರು, ಮಾ. 18: ರಾಜ್ಯದ 14 ಲೋಕಸಭೆ ಕ್ಷೇತ್ರಗಳಿಗೆ ಎ.18 ರಂದು ಚುನಾವಣೆ ನಡೆಯಲಿದ್ದು, ನಾಳೆ(ಮಾ.19) ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಹಾಗೂ ವಿಪಕ್ಷ ಬಿಜೆಪಿ ಇನ್ನೂ ಅಭ್ಯರ್ಥಿಗಳ ಅಂತಿಮಗೊಳಿಸಲು ಕಸರತ್ತು ನಡೆಸಿದೆ.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ(ಮೀಸಲು), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ(ಮೀಸಲು), ಬೆಂಗಳೂರು ಗ್ರಾಮಾಂತರ, ಬೆಂ.ದಕ್ಷಿಣ, ಬೆಂ.ಉತ್ತರ, ಬೆಂ.ಕೇಂದ್ರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೇರಿದಂತೆ ಒಟ್ಟು 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ(ಮಾ.19)ಯಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ಮಾಡಿಕೊಂಡಿದ್ದು, ಮೊದಲ ಹಂತದ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳ ಪೈಕಿ ಕಾಂಗ್ರೆಸ್-9 ಮತ್ತು ಜೆಡಿಎಸ್-5 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಈಗಾಗಲೇ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ನಾಳೆ(ಮಾ.19) ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮಗೊಳಿಸುವ ಸಾಧ್ಯತೆಗಳಿವೆ.

ಜೆಡಿಎಸ್ ಈಗಾಗಲೇ ಹಾಸನ ಮತ್ತು ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಉಡುಪಿ-ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಜೆಡಿಎಸ್ ವರಿಷ್ಠ ದೇವೇಗೌಡ ಸೇರಿದಂತೆ ಮುಖಂಡರು ಕಸರತ್ತು ನಡೆಸಿದ್ದಾರೆ.

ಈ ಮಧ್ಯೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ವರಿಷ್ಠರ ಅನುಮೋದನೆಗೆ ಬಿಜೆಪಿ ರಾಷ್ಟೀಯ ಅಧ್ಯಕ್ಷರಿಗೆ ಪಟ್ಟಿಯನ್ನು ರವಾನಿಸಿತ್ತು. ಆದರೆ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿಧನದ ಹಿನ್ನೆಲೆಯಲ್ಲಿ ನಾಳೆ ಸಂಜೆ ವೇಳೆಗೆ ಬಿಜೆಪಿ ಮೊದಲ ಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ.

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಬೆಂಗಳೂರು ಉತ್ತರ, ಹಾಸನ, ತುಮಕೂರು ಸೇರಿದಂತೆ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಪ್ರಮೋದ್ ಮಧ್ವರಾಜ್ ನಿಶ್ಚಿತವಾಗಿದೆ ಎನ್ನಲಾಗಿದ್ದು, ಈ ನಡುವೆ ತುಮಕೂರು ಕ್ಷೇತ್ರ ಕಾಂಗ್ರೆಸ್‌ಗೆ ಬಿಟ್ಟುಕೊಡಬೇಕೆಂಬ ಒತ್ತಡವೂ ಹೆಚ್ಚಾಗಿದೆ.

ಬಿಜೆಪಿಯ ಹಾಲಿ ಸಂಸದರಿಗೆ ಟಿಕೆಟ್ ಅಂತಿಮವಾಗಿದ್ದು, ಹಾಸನ ಕ್ಷೇತ್ರದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಸಚಿವ ಎ.ಮಂಜುಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವ ಬಚ್ಚೇಗೌಡ, ಬೆಂಗಳೂರು ಗ್ರಾಮಾಂತರದಿಂದ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸುವುದು ನಿಶ್ವಿತವಾಗಿದೆ.

ಸುಮಲತಾ ಸ್ಪರ್ಧೆ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿರುವ ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪಧಿಸುವ ಘೋಷಣೆ ಮಾಡಿದ್ದು, ಬಿಜೆಪಿಯೂ ಅವರಿಗೆ ಬೆಂಬಲ ಘೋಷಿಸುವ ಸಾಧ್ಯತೆಗಳಿವೆ.

ನಾಳೆ (ಮಾ.19) ಅಧಿಸೂಚನೆ ಹೊರಬೀಳಲಿದ್ದು, ಮಾ.26 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಮಾ.27ರಿಂದ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾ.29ಕ್ಕೆ ನಾಮಪತ್ರ ಹಿಂಪಡೆಯಲು ಕೊನೆ. ಎ.18ಕ್ಕೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡ ಬಳಿಕ ರಾಜ್ಯದಲ್ಲಿ ಚುನಾವಣೆ ಕಾವು ಮತ್ತಷ್ಟು ಏರಲಿದೆ

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top