ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.37 ಲಕ್ಷ ನಗದು ಜಪ್ತಿ
ಕೋಲಾರ,ಮಾ.18: ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 2,37,500 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ಕೋಲಾರ ತಾಲೂಕಿನ ಚೆಕ್ ಪೊಸ್ಟ್ ನಲ್ಲಿ ವಶ ಪಡಿಸಿಕೊಂಡಿದ್ದಾರೆ.
ಚುನಾವಣಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾಗ ಯಾವುದೇ ದಾಖಲೆ ಇಲ್ಲದೆ ಸ್ಕಾರ್ಪಿಯೋ ಕಾರಿನಲ್ಲಿ ಸಾಗಿಸುತ್ತಿದ್ದ 2,37,500 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಈ ಹಣ ಬೆಂಗಳೂರು ಮೂಲದ ವೆಂಕಟರಾಮಪ್ಪ ಎಂಬುವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.
Next Story