ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಐದು ವರ್ಷ ಜೈಲು
ಮೈಸೂರು,ಮಾ.19: ಹತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಕಾರು ಚಾಲಕನಿಗೆ ಪೋಕ್ಸೋ ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ.
ಚಾಮರಾಜನಗರ ಜಿಲ್ಲೆಯ ಚಂಗಡಿ ಗ್ರಾಮದ ನಿವಾಸಿ ಎಂ.ರಾಜು(31) ಶಿಕ್ಷೆಗೊಳಗಾದ ವ್ಯಕ್ತಿ. ಈತ 2018ರ ಮೇ.7ರಂದು ಅಪಾರ್ಟ್ಮೆಂಟ್ ನೆಲಮಾಳಿಗೆಯಲ್ಲಿ ಇತರೆ ಮಕ್ಕಳೊಂದಿಗೆ ಆಟವಾಡುತ್ತಿದ್ದ ಹತ್ತು ವರ್ಷದ ಬಾಲಕಿಗೆ ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದ ಕುರಿತು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಐದು ವರ್ಷ ಶಿಕ್ಷೆ ವಿಧಿಸಿದರು. ಸರ್ಕಾರದ ಪರವಾಗಿ ವಿಶೆಷ ಸರ್ಕಾರಿ ಅಭಿಯೋಜಕ ಬಿ.ಸಿ.ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.
Next Story