ಹನೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಹನೂರು: ಹನೂರು ಪಟ್ಟಣದ ಹೊರವಲಯದ ಮಲೈಮಹದೇಶ್ವರಬೆಟ್ಟ ರಸ್ತೆಯ ಎಲ್ಲೆಮಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕಾರು ಪಲ್ಟಿಯಾಗಿ ಪಕ್ಕದ ಜಮೀನಿಗೆ ಬಿದ್ದಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಹನೂರು ಪಟ್ಟಣದ ಹೂರ ವಲಯದ ತಿರುವಿನೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೂಡೆದು ಸಮೀಪದಲ್ಲಿನ ಜಮೀನಿನೊಂದರಲ್ಲಿ ಬಿದ್ದಿದ್ದು, ಅದೃಷ್ಟವಶಾತ್ ಯಾರಿಗೂ ಸಹ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ಕು ಮಂದಿ ಇದ್ದರು ಎನ್ನಲಾಗಿದೆ.
Next Story