ಮತ್ತೆ ಬಿಜೆಪಿ ಸೇರಿದ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ
ವಿಜಯಪುರ, ಮಾ.24: ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮತ್ತೆ ಬಿಜೆಪಿಗೆ ಮರಳಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಆಪ್ತ ಬೆಂಬಲಿಗರೊಂದಿಗೆ ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಗೋವಿಂದ್ ಕಾರಜೋಳ, ಉಮೇಶ ಕತ್ತಿ, ಮುರುಗೇಶ ನಿರಾಣಿ ಉಪಸ್ಥಿತರಿದ್ದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಸವನಬಾಗೇವಾಡಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್ ಸೆರ್ಪಡೆಯಾಗಿದ್ದರು.
Next Story