ಕೋಲಾರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಎಚ್.ಮುನಿಯಪ್ಪ ನಾಮಪತ್ರ ಸಲ್ಲಿಕೆ
ಕೋಲಾರ, ಮಾ.25: ಕೋಲಾರ ಲೋಕಸಭಾ ಕ್ಷೇತ್ರದಿಂದ 8ನೇ ಬಾರಿ ಆಯ್ಕೆ ಬಯಸಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕೋಲಾರದ ಹಾಲಿ ಸಂಸದ ಕೆ.ಎಚ್.ಮುನಿಯಪ್ಪ ಇಂದು ನಾಮಪತ್ರ ಸಲ್ಲಿಸಿದರು,
ಬೃಹತ್ ರ್ಯಾಲಿಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಮುನಿಯಪ್ಪ ಅವರು ಚುನಾವಣಾಧಿಕಾರಿ ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಾರೆಡ್ಡಿ ಮತ್ತಿತರರು ಜೊತೆಗಿದ್ದರು.
Next Story