ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಎ.1: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಡಾ.ಅವಿನಾಶ್ ಮೆನನ್ ರಾಜೇಂದ್ರರನ್ನು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕ(ಪರೀಕ್ಷೆ) ಪ್ರಶಾಂತ್ ಕುಮಾರ್ ಮಿಶ್ರಾರನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Next Story