ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಮೈಸೂರು,ಏ.1: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದ ಆರೋಪದ ಮೇಲೆ ಇಬ್ಬರನ್ನು ನಗರದ ಎನ್.ಆರ್.ಠಾಣಾ ಪೊಲೀಸರು ಬಂಧಿಸಿದ್ದಾರೆ.
ಎನ್.ಆರ್.ಮೊಹಲ್ಲಾದ ಜೈ ಶಿವಮಾದೇವ (53) ಹಾಗೂ ಖೈಸರ್ (30) ಬಂಧಿತ ಆರೋಪಿಗಳು. ಬಂಧಿತರು 10 ವರ್ಷದ ಅಪ್ರಾಪ್ತ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದ್ದು, ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ಈ ಘಟನೆ ನಡೆದಿತ್ತು.
ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರಿಗೆ ಜೈಶಿವಮಾದೇವ ಎಂಬಾತ ಚೋಕಲೇಟ್ ಕೊಡಿಸುವ ನೆಪವೊಡ್ಡಿ ಪಾರ್ಕ್ ಗೆ ಕರೆದೊಯ್ದು ಮೊದಲು ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದ್ದು, ಇದ್ದನ್ನು ಕಂಡು ಖೈಸರ್ ಜೈಶಿವಮಾದುವನ್ನ ಬೆದರಿಸಿ ಕಳುಹಿಸಿದ್ದಾನೆ. ನಂತರ ಬಾಲಕಿಯರನ್ನು ಬೆದರಿಸಿ ಖೈಸರ್ ಕೂಡಾ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಆಟವಾಡುತ್ತಿದ್ದ ಮಕ್ಕಳು ಮನೆಗೆ ಬಾರದಿದ್ದಾಗ ಆತಂಕಗೊಂಡ ಪೋಷಕರು, ಪಾರ್ಕ್ನಲ್ಲಿದ್ದ ಇಬ್ಬರು ಬಾಲಕಿಯರನ್ನು ಮನೆಗೆ ಕರೆದು ಕೊಂಡು ಬಂದು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಪೋಷಕರು ಠಾಣೆಗೆ ತೆರಳಿ ದೂರು ನೀಡಿದ್ದು, ಕೂಡಲೇ ಕಾರ್ಯ ಪ್ರೌವೃತ್ತರಾದ ಪೊಲಿಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಎನ್.ಆರ್.ಠಾಣೆಯಲ್ಲಿ ಫೋಕ್ಸೊ ಪ್ರಕರಣ ದಾಖಲಾಗಿದೆ.