ಮಂಡ್ಯ, ಎ.5: ಪಕ್ಷೇತರ ಅಭ್ಯರ್ಥಿ ಸುಮಲತಾ ನಟಿಸಿರುವ ಜಾಹೀರಾತು ಟಿವಿಗಳಲ್ಲಿ ಪ್ರಸಾರವಾಗುತ್ತಿದ್ದು, ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.