ಎ.13ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ
ಬೆಂಗಳೂರು, ಎ.11: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎ.13ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಎ.13ರಂದು ಮಧ್ಯಾಹ್ನ 12 ಗಂಟೆಗೆ ಕೋಲಾರದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರವಾಗಿ ಮತ ಯಾಚನೆ ಮಾಡಲಿದ್ದಾರೆ. ಆನಂತರ, ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗದಲ್ಲಿ ಮೈತ್ರಿ ಅಭ್ಯರ್ಥಿ ಚಂದ್ರಪ್ಪ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಸಂಜೆ 5.30ಕ್ಕೆ ಮಂಡ್ಯ ಜಿಲ್ಲೆಯ ಕೆ.ಆರ್.ನಗರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಬಹಿರಂಗ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ.
Next Story